ಗುಜರಾತ್ ಸಿಡಿಲಬ್ಬರದ ಬ್ಯಾಟಿಂಗ್: ಹೈದರಾಬಾದ್ ಗೆಲುವಿಗೆ ಬಿಗ್ ಟಾರ್ಗೆಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಸನ್‌ರೈಸರ್ಸ್ ಹೈದರಾಬಾದ್ ಗುಜರಾತ್ ಟೈಟಾನ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನದಿಂದ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 224 ರನ್​ಗಳಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ಉತ್ತಮ ಆರಂಭಪಡೆದುಕೊಂಡಿತು. ಸಾಯಿ ಸುದರ್ಶನ್ ಮತ್ತು ಶುಭಮನ್ ಗಿಲ್ 82 ರನ್ ಗಳಿಸಿದರು.

ಸುದರ್ಶನ್ 23 ಎಸೆತಗಳಲ್ಲಿ 9 ಬೌಂಡರಿಗಳ ಸಹಿತ 48 ರನ್ ಗಳಿಸಿ ಔಟಾದರು. ನಾಯಕ ಶುಭಮನ್ ಗಿಲ್ 38 ಎಸೆತಗಳಲ್ಲಿ 10 ಬೌಂಡರಿ, 2 ಸಿಕ್ಸರ್​ ಸಹಿತ 76 ರನ್​ಗಳಿಸಿ ರನ್​ಔಟ್ ಆದರು. ಜೋಸ್ ಬಟ್ಲರ್ 37 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್​ಗಳ ಸಹಿತ 64 ರನ್ ಗಳಿಸಿದರೆ, ವಾಷಿಂಗ್ಟನ್ ಸುಂದರ್ 16 ಎಸೆತಗಳಲ್ಲಿ 21 ರನ್​ಗಳಿಸಿದರು. ಶಾರುಖ್ ಖಾನ್ ಅಜೇಯ 6, ರಾಹುಲ್ ತೆವಾಟಿಯಾ 6ರನ್​ಗಳಿಸಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!