ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಗಾರು ತಡವಾಗಿ ಆದರೂ ಈ ಬಾರಿ ಭರ್ಜರಿ ಎಂಟ್ರಿ ಪಡೆದುಕೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಲ್ಲಿ ವರುಣ ಅಬ್ಬರಿಸಿ ಆರ್ಭಟಿಸುತ್ತಿದ್ದಾನೆ.
ಗುಜರಾತಿನಾದ್ಯಂತ ಮಳೆ ಜೋರಾಗಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಗುಜರಾತಿನ ಜುನಾಗಢ್ ಎಂಬ ಪ್ರದೇಶದಲ್ಲಿ ಹೆಚ್ಚಾಗಿ ಮಳೆ ಸುರಿದಿದ್ದು ಕಳೆದ 24 ಘಂಟೆಗಳಲ್ಲಿ 241 ಮಿಮೀ. ದಾಖಲಾಗಿದೆ.
ನಗರದಲ್ಲಿ ಕಳೆದ 24 ಘಂಟೆಗಳಲ್ಲಿ ಮಳೆ ಸುರಿದ ಪರಿಣಾಮ ವಾಹನಗಳು ಹಾಗೂ ಜಾನುವಾರುಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ. ಮತ್ತೊಂದೆಡೆ ಕಾರುಗಳು ಒಂದರ ಮೇಲೊಂದು ರಾಶೀ ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪ್ರವಾಹದಿಂದಾಗಿ ಗುಜರಾತಿನಲ್ಲಿ ಎರಡು ರಾಷ್ಟ್ರೀಯ ಹೆದ್ದಾರಿ, 10 ರಾಜ್ಯ ಹೆದ್ದಾರಿ, 300 ಗ್ರಾಮೀಣ ರಸ್ತೆಗಳನ್ನು ಮುಚ್ಚಲಾಗಿದೆ. ಪ್ರವಾಹದಲ್ಲಿ ಸಿಲುಕಿದ್ದ ಮೂರು ಸಾವಿರಕ್ಕೂ ಹೆಚ್ಚಿನ ಮಂದಿಯನ್ನು NDRF ಹಾಗೂ SDRF ಸಿಬ್ಬಂದಿ ರಕ್ಷಿಸಿ ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಕಲ್ಪಿಸಿದ್ದಾರೆ.