ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಲಾಬ್ ಚಂದ್ ಕಟಾರಿಯಾ ಅವರು ಅಸ್ಸಾಂನ 31 ನೇ ರಾಜ್ಯಪಾಲರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ಶ್ರೀಮಂತ ಶಂಕರದೇವ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಕಟಾರಿಯಾ ಅವರಿಗೆ ಗೌಹಾಟಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರು ಪ್ರಮಾಣ ವಚನ ಬೋಧಿಸಿದರು.
ಪ್ರಮಾಣ ವಚನ ಸಮಾರಂಭದಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಅವರ ಸಂಪುಟ ಸಹೋದ್ಯೋಗಿಗಳು, ಬಿಜೆಪಿ ನಾಯಕರು ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಗುಲಾಬ್ ಚಂದ್ ಕಟಾರಿಯಾ ಅವರು ರಾಜಸ್ಥಾನದ ಉದಯಪುರದಿಂದ ಬಂದವರು ಮತ್ತು ರಾಜ್ಯಪಾಲರಾಗಿ ನೇಮಕಗೊಳ್ಳುವ ಮೊದಲು ರಾಜಸ್ಥಾನದ ಮಾಜಿ ಗೃಹ ಮಂತ್ರಿ ಮತ್ತು ರಾಜಸ್ಥಾನ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದರು.
ಮಂಗಳವಾರ ರಾಜಭವನಕ್ಕೆ ಆಗಮಿಸಿದ ಗುಲಾಬ್ ಚಂದ್ ಕಟಾರಿಯಾ ಅವರಿಗೆ ರಾಜಭವನ ಸಾಂಪ್ರದಾಯಿಕವಾಗಿ ಬರಮಾಡಿಕೊಂಡಿತ್ತು.