ಗುಲ್ಜಾರ್ ಅಹ್ಮದ್ ಪಾಕ್ ಹಂಗಾಮಿ ಪ್ರಧಾನಿ: ನಾಮನಿರ್ದೇಶನ ಮಾಡಿದ ಇಮ್ರಾನ್ ಖಾನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಾಜಿ ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್ ಅವರನ್ನು ಹಂಗಾಮಿ ಪ್ರಧಾನಿಯಾಗಿ ನಾಮನಿರ್ದೇಶನ ಮಾಡಿದ್ದಾರೆ.
ಪಿಟಿಐ ಕೋರ್ ಕಮಿಟಿಯ ಸಮಾಲೋಚನೆ ಮತ್ತು ಅನುಮೋದನೆಯ ನಂತರ ಖಾನ್ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ .
ಪಿಟಿಐ ನಾಯಕ ಮತ್ತು ನಿರ್ಗಮಿತ ಮಾಹಿತಿ ಸಚಿವ ಫವಾದ್ ಚೌಧರಿ ಅವರು ಟ್ವಿಟರ್‌ನಲ್ಲಿ ಈ ಘೋಷಣೆ ಮಾಡಿದ್ದು, ಹಿಂದಿನ ದಿನ ಪಾಕಿಸ್ತಾನದ ಅಧ್ಯಕ್ಷ ಆರಿಫ್ ಅಲ್ವಿ ಅವರು ಹಂಗಾಮಿ ಪ್ರಧಾನಿ ನೇಮಕಗೊಳ್ಳುವವರೆಗೆ ಖಾನ್ ಪ್ರಧಾನಿಯಾಗಿ ಮುಂದುವರಿಯುತ್ತಾರೆ ಎಂದು ಅಧಿಸೂಚನೆಯನ್ನು ಹೊರಡಿಸಿದ್ದರು. ಅದರಂತೆ ಸದ್ಯ ಮಾಜಿ ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್ ಅವರನ್ನು ಹಂಗಾಮಿ ಪ್ರಧಾನಿಯಾಗಿ ನಾಮನಿರ್ದೇಶನ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!