ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರ ನಟ ಶಿವರಂಜನ್ ಬೋಳಣ್ಣವರ ಅವರ ಮೇಲೆ ಗುಂಡಿನ ದಾಳಿಗೆ ಯತ್ನ ನಡೆದಿದೆ. ಬೈಲಹೊಂಗಲ ಪಟ್ಟಣದಲ್ಲಿ ಈ ಅದೃಷ್ಟವಶಾತ್ ಶಿವರಂಜನ್ ಅಪಾಯದಿಂದ ಪಾರಾಗಿದ್ದಾರೆ.
ಬೈಲಹೊಂಗಲ ಪಟ್ಟಣದ ಹನುಮಂತ ದೇವಸ್ಥಾನದ ಬಳಿ ಇರುವ ಶಿವರಂಜನ್ ಬೋಳಣ್ಣವರ ಅವರ ಹಳೆಯ ಮನೆ ಬಳಿ ಈ ಘಟನೆ ನಡೆದಿದೆ. ಮೂಲಗಳ ಪ್ರಕಾರ ಸುಮಾರು ಮೂರ್‍ನಾಲ್ಕು ಸುತ್ತು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.
ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಹಿತ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದು, ಮಾಹಿತಿ ಸಂಗ್ರಹಿಸಿದ್ದಾರೆ.