ಮಾವೋವಾದಿಗಳು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ: 6 ಮಂದಿ ನಕ್ಸಲರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್‌ಗಢದ ಬಿಜಾಪುರದಲ್ಲಿ ಮಾವೋವಾದಿಗಳು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಗುಂಡಿನ ಚಕಮಕಿಯಲ್ಲಿ ಮಹಿಳೆಯರು ಸೇರಿದಂತೆ ಆರು ನಕ್ಸಲರು ಸಾವನ್ನಪ್ಪಿದ್ದಾರೆ.

ಬಸಗುಡ ಪೊಲೀಸ್​ ಠಾಣೆ ವ್ಯಾಪ್ತಿಯ ಚಿಕುರಭಟ್ಟಿ ಮತ್ತು ಪುಸ್ಬಾಕ ಗ್ರಾಮಗಳ ಅರಣ್ಯದಲ್ಲಿ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆಯಲ್ಲಿ ಜಿಲ್ಲಾ ಮೀಸಲು ಪಡೆ, ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಕೋಬ್ರಾ ಕಮಾಂಡೋಗಳು ಭಾಗವಹಿಸಿದ್ದರು. ಒಟ್ಟಾರೆಯಾಗಿ, ಮಹಿಳೆ ಸೇರಿ ಒಟ್ಟು ಆರು ಜನರು ಭದ್ರತಾ ಸಿಬ್ಬಂದಿಯ ಗುಂಡೇಟಿಗೆ ಬಲಿಯಾಗಿದ್ದಾರೆ.

ಇದೀಗ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಬಿಜಾಪುರದ ಬಸ್ತಾರ್‌ನಲ್ಲಿ ಏಪ್ರಿಲ್ 19 ರಂದು ಮೊದಲ ಹಂತದ ಚುನಾವಣೆಗೆ ಮತದಾನ ನಡೆಯಲಿದೆ. ಆದರೆ ಅದಕ್ಕೂ ಮುನ್ನ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!