ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದಲ್ಲಿ ಇಂದು ಬೆಳಗಿನ ಜಾವ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
ಎಲ್ಒಸಿ ಬಳಿಯ ಜುಮಗುಂಡ್ ಪ್ರದೇಶದ ಬಳಿ ಭಯೋತ್ಪಾದಕರು ಇರುವ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ದೊರಕಿದ್ದು, ಪೊಲೀಸರು ಹಾಗೂ ಸೈನಿಕರು ಉಗ್ರರ ಮೇಲೆ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಗುಂಡಿನ ಚಕಮಕಿ ಇನ್ನೂ ನಡೆಯುತ್ತಲಿದ್ದು, ಯಾವುದೇ ಹತ್ಯೆಯ ಬಗ್ಗೆ ಮಾಹಿತಿ ದೊರಕಿಲ್ಲ.