ಕುಲ್ಗಾಮ್‌ನಲ್ಲಿ ಉಗ್ರರು-ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ: TRF ಕಮಾಂಡರ್ ಸೆರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿ ನಂತರ ಇಂದು ಕುಲ್ಗಾಮ್‌ನಲ್ಲಿ ಗುಂಡಿನ ಚಕಮಕಿ ನಡೆದಿದೆ. ಈ ಕಾರ್ಯಾಚರಣೆಯಲ್ಲಿ ಟಿಆರ್‌ಎಫ್ ಭಯೋತ್ಪಾದಕ ಸಿಕ್ಕಿಬಿದ್ದಿದ್ದಾನೆ.

ಕುಲ್ಗಾಮ್ ಜಿಲ್ಲೆಯ ತಂಗ್‌ಮಾರ್ಗ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಈ ಗುಂಡಿನ ಚಕಮಕಿ ನಡೆದಿದೆ. ಈ ಪ್ರದೇಶವು ಪೂಂಚ್ ಜಿಲ್ಲೆಯ ಗಡಿಯಲ್ಲಿದೆ.

ಪಹಲ್ಗಾಮ್‌ನಲ್ಲಿ ನಡೆದ ಹೇಡಿತನದ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಜನರಿಗೆ ಸದ್ಯದಲ್ಲೇ ಉತ್ತರ ನೀಡುತ್ತೇವೆ. ಯಾವುದೇ ಭಯೋತ್ಪಾದಕ ಕೃತ್ಯಗಳಿಂದ ಭಾರತವನ್ನು ಹೆದರಿಸಲು ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!