ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಪ್ರಾಂತ್ಯದ ರಜೌರಿ ಜಿಲ್ಲೆಯ ಬಾಜಿ ಕಲಾಕೋಟ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಹುತಾತ್ಮ ಯೋಧರಲ್ಲಿ ಒಬ್ಬರು ಅಧಿಕಾರಿ ಸೇರಿದ್ದಾರೆ ಎಂದು ಸೇನಾ ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಉಗ್ರರ ಪತ್ತೆ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಬಾಜಿ ಬಾಲಕೋಟ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ಮತ್ತು ಜಮ್ಮು ಪೊಲೀಸರು ಆ ಪ್ರದೇಶವನ್ನು ಸುತ್ತುವರಿದು ಜಂಟಿ ಕಾರ್ಯಾಚರಣೆ ಕೈಗೊಂಡಿದ್ದರು.