ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ಮಧ್ಯೆ ಎನ್ಕೌಂಟರ್ ನಡೆದಿದೆ.
ಪೊಲೀಸರು ಮತ್ತು ಸೇನಾ ಸಿಬ್ಬಂದಿ ಉಗ್ರರ ವಿರುದ್ಧ ಜಂಟಿಯಾಗಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ಪುಲ್ವಾಮ ಜಿಲ್ಲೆಯ ಪರಿಗಾಮ್ ಪ್ರದೇಶದಲ್ಲಿ ಭಯೋತ್ಪಾದಕರ ಚಲನವಲನದ ಮಾಹಿತಿ ಮೇರೆಗೆ ಪೊಲೀಸರು ಹಾಗೂ ಸೇನೆ ಇಡೀ ಪ್ರದೇಶವನ್ನು ಸುತ್ತುವರಿದು, ಶೋಧ ಕಾರ್ಯ ಶುರು ಮಾಡಿತ್ತು. ಈ ವೇಳೆ, ಅಡಗಿ ಕುಳಿತಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಇದರಿಂದ ಭದ್ರತಾ ಸಿಬ್ಬಂದಿ ಕೂಡ ಪ್ರತಿದಾಳಿ ಮಾಡಿದ್ದು,ಇದುವರೆಗೆ ಯಾವುದೇ ಗಾಯ, ಹಾನಿಯ ಬಗ್ಗೆ ವರದಿಯಾಗಿಲ್ಲ.
ಈ ಕುರಿತು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದು, ಪುಲ್ವಾಮದ ಪರಿಗಾಮ್ ಪ್ರದೇಶದಲ್ಲಿ ಎನ್ಕೌಂಟರ್ ಆರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಪ್ರವೃತ್ತವಾಗಿವೆ. ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಸಾಮಾಜಿ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಲಾಗಿದೆ.