March 29, 2026
Sunday, March 29, 2026
spot_img

ಛತ್ತೀಸ್‌ಗಢದಲ್ಲಿ ಗುಂಡಿನ ಚಕಮಕಿ: 5 ಲಕ್ಷ ರೂ. ಬಹುಮಾನ ಹೊಂದಿದ್ದ ಮಾವೋವಾದಿ ಕಮಾಂಡರ್ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ದಕ್ಷಿಣ ಬಸ್ತಾರ್‌ನ ಪೋಲಂಪಲ್ಲಿನ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮಾವೋವಾದಿ ಕಮಾಂಡರ್ ಹತರಾಗಿದ್ದಾರೆ.

ಹತನಾದ ಮಾವೋವಾದಿ ಕಮಾಂಡರ್ ಮುಚಾಕಿ ಕೈಲಾಶ್ ಎಂದು ಗುರುತಿಸಲಾಗಿದ್ದು, ಆತನ ತಲೆಗೆ 5 ಲಕ್ಷ ರೂ.ಗಳ ಬಹುಮಾನ ಘೋಷಿಸಲಾಗಿತ್ತು.

ಅರಣ್ಯದಲ್ಲಿ ಮಾವೋವಾದಿ ಇರುವ ಮಾಹಿತಿ ಆಧರಿಸಿ ಭದ್ರತಾ ಪಡೆ ಕಾರ್ಯಾಚರಣೆಗೆ ಇಳಿದಿದ್ದು, ಈ ವೇಳೆ ನಕ್ಸಲರು ನಡೆಸಿದ ಗುಂಡಿನ ದಾಳಿಗೆ ಪ್ರತಿಯಾಗಿ ಸುಕ್ಮಾ ಜಿಲ್ಲಾ ಮೀಸಲು ಗಾರ್ಡ್ ನಡೆಸಿದ ಎನ್-ಕೌಂಟರ್‌ನಲ್ಲಿ ಓರ್ವ ನಕ್ಸಲ್ ಹತ್ಯೆಯಾಗಿದ್ದಾನೆ. ಆತನ ಬಳಿ ಇದ್ದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಸುಕ್ಮಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !