ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಇಂದು ಮಂಗಳವಾರ ನಸುಕಿನ ಜಾವ ಗುಂಡಿನ ಚಕಮಕಿ ನಡೆದಿದೆ.
ಭಯೋತ್ಪಾದಕರ ಚಲನವಲನ ಬಗ್ಗೆ ಮಾಹಿತಿ ಬಂದ ನಂತರ ಭದ್ರತಾ ಪಡೆಗಳು ನಿನ್ನೆ ಸೋಮವಾರ ರಾತ್ರಿ ಸುರಂಕೋಟ್‌ನ ಲಸಾನಾ ಗ್ರಾಮದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ರಾತ್ರಿ ಸುರಂಕೋಟ್‌ನ ಲಸಾನಾದಲ್ಲಿ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯ ಸಮಯದಲ್ಲಿ ಭಯೋತ್ಪಾದಕರ ಚಟುವಟಿಕೆ ಬಗ್ಗೆ ಮಾಹಿತಿ ಸಿಕ್ಕಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಯಿತು. ಭಯೋತ್ಪಾದಕರು ತಪ್ಪಿಸಿಕೊಳ್ಳದಂತೆ ಶೋಧ ಕಾರ್ಯಾಚರಣೆಗಳು ಮುಂದುವರೆದಿವೆ.