ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ: 3 ಎಲ್‌ಇಟಿ ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು ಹಾಗೂ ಕಾಶ್ಮೀರದಲ್ಲಿ ಮತ್ತೆ ಗುಂಡಿನ ಚಕಮಕಿ ಯಾಗಿದ್ದು, ಮಂಗಳವಾರ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಶೋಪಿಯಾನ್‌ನ ನಾಗಬಾಲ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಈ ಶೋಧ ಕಾರ್ಯಾಚರಣೆಯ ವೇಳೆ ಮೂವರು ಉಗ್ರರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹತ್ಯೆಗೀಡಾದ ಭಯೋತ್ಪಾದಕರು ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‌ಇಟಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!