ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಇಬ್ಬರು ಭಯೋತ್ಪಾದಕರ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲದಲ್ಲಿ (Baramulla) ಭಯೋತ್ಪಾದಕರು (Terrorist) ಮತ್ತು ಭದ್ರತಾ ಪಡೆಗಳ (Security Force) ನಡುವೆ ನಡೆದ ಎನ್‌ಕೌಂಟರ್‌ನಲ್ಲಿ (Encounter) ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದು, ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಉತ್ತರ ಕಾಶ್ಮೀರದ ಸೋಪೋರ್ ಪ್ರದೇಶದ ಚೆಕ್ ಮೊಹಲ್ಲಾ ನೌಪೋರಾದಲ್ಲಿ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಪ್ರಾರಂಭಗೊಂಡು, ಶುಕ್ರವಾರ ಮುಂಜಾನೆಯೂ ಗುಂಡಿನ ದಾಳಿ ಮುಂದುವರೆದಿದೆ. ಇದುವರೆಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಇಬ್ಬರು ಸೇನಾ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!