ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾರ್ಖಂಡ್‌ನ ಪಲಮು ಜಿಲ್ಲೆಯಲ್ಲಿ ಇಂದು ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ.
ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು. ಪಲಮು ಡಿಐಜಿ ನೌಶಾದ್ ಆಲಂ ಅವರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ.
ಪಲಮು ಜಿಲ್ಲೆಯ ಮನಾಟು ಪೊಲೀಸ್ ಠಾಣೆ ವ್ಯಾಪ್ತಿಯ ಕೇದಾಲ್ ಎಂಬಲ್ಲಿ ಈ ಘಟನೆ ನಡೆದಿದೆ. ಗುಂಡಿನ ಚಕಮಕಿ ಮುಂದುವರಿದಿದ್ದು, ನಕ್ಸಲರನ್ನು ಹಿಡಿದು ಪರಿಸ್ಥಿತಿಯನ್ನು ನಿಯಂತ್ರಿಸಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ.