ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು-ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ರಾಷ್ಟ್ರೀಯ ರೈಫಲ್ಸ್ ಯುನಿಟ್ (Rashtriya Rifles Unit) ಮುನ್ನಡೆಸುತ್ತಿದ್ದ ಸೇನಾ ಪಡೆಯ ಕರ್ನಲ್, ಮೇಜರ್ ಮತ್ತು ಓರ್ವ ಪೊಲೀಸ್ ಹುತಾತ್ಮರಾಗಿದ್ದಾರೆ.
ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋಂಚಕ್ ಮತ್ತು ಪೊಲೀಸ್ ಉಪ ಅಧೀಕ್ಷಕ ಹ್ಯುಮನ್ಯು ಪ್ರಾಣ ಕಳೆದುಕೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ 2020ರ ಬಳಿಕ ಇದೇ ಮೊದಲ ಬಾರಿಗೆ ಕಮಾಂಡಿಂಗ್ ಅಧಿಕಾರಿಯೊಬ್ಬರು ಉಗ್ರರ ಜೊತೆಗಿನ ಎನ್‌ಕೌಂಟರ್‌ನಲ್ಲಿ ಸಾವು ಕಂಡಿದ್ದಾರೆ. ಅನಂತನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದಲ್ಲಿ ಭಯೋತ್ಪಾದಕರು ಹಾಗೂ ಸೇನಾಪಡೆ ಮತ್ತು ಜಮ್ಮು ಕಾಶ್ಮೀರ ಪೊಲೀಸರ ನಡುವೆ ಎನ್‌ಕೌಂಟರ್ ನಡೆಯುತ್ತಿದೆ.
ಡೋಲ್ ಪ್ರದೇಶದಲ್ಲಿ ಅಡಗಿರುವ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಬುಧವಾರ ಬೆಳಗ್ಗೆ ಎನ್‌ಕೌಂಟರ್ ಆರಂಭವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.