Tuesday, October 14, 2025

ಪಾಕಿಸ್ತಾನದಲ್ಲಿ ಗುಂಡಿನ ಚಕಮಕಿ: 35 ಉಗ್ರರ ಹತ್ಯೆ, 12 ಸೈನಿಕರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ನಿಷೇಧಿತ ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ್(ಟಿಟಿಪಿ)ಗೆ ಸೇರಿದ 35 ಭಯೋತ್ಪಾದಕರು ಹತ್ಯೆಯಾಗಿದೆ ಮತ್ತು 12 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಸೇನೆ ತಿಳಿಸಿದೆ.

ಕಳೆದ ನಾಲ್ಕು ದಿನದಿಂದ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ತೀವ್ರ ಗುಂಡಿನ ಚಕಮಕಿಯಲ್ಲಿ, ಟಿಟಿಪಿಗೆ ಸೇರಿದ 22 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಮಿಲಿಟರಿಯ ಮಾಧ್ಯಮ ವಿಭಾಗವಾದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್(ಐಎಸ್‌ಪಿಆರ್) ಶನಿವಾರ ತಿಳಿಸಿದೆ.

ದಕ್ಷಿಣ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ, 13 ಟಿಟಿಪಿ ಭಯೋತ್ಪಾದಕರನ್ನು ತಟಸ್ಥಗೊಳಿಸಲಾಯಿತು ಮತ್ತು ತೀವ್ರ ಗುಂಡಿನ ಚಕಮಕಿಯಲ್ಲಿ 12 ಸೈನಿಕರು ಪ್ರಾಣ ಕಳೆದುಕೊಂಡರು ಎಂದು ಐಎಸ್‌ಪಿಆರ್ ತಿಳಿಸಿದೆ.

error: Content is protected !!