ದಕ್ಷಿಣ ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಎನ್‌ಕೌಂಟರ್‌ನಲ್ಲಿ ಉಗ್ರನನ್ನು ಹೊಡೆದುರುಳಿಸಿದ ಯೋಧರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹೈಫ್ ಶರ್ಮಲ್ ಪ್ರದೇಶದಲ್ಲಿ ಸೇನಾ ಸಿಬ್ಬಂದಿ ಓರ್ವ ಉಗ್ರನನ್ನು ಎನ್‌ಕೌಂಟರ್‌ ನಡೆಸಿ ಹತ್ಯೆ ಮಾಡಿದ್ದಾರೆ.
ಶೋಪಿಯಾನ್‌ನ ಹೈಫ್ ಶಿರ್ಮಲ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಓರ್ವ ಉಗ್ರನನ್ನು ಸೆದೆಬಡಿಯಲಾಗಿದೆ.
ಇನ್ನು ಪೊಲೀಸರು ಮತ್ತು ಭದ್ರತಾ ಪಡೆಗಳ ಯೋಧರು ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here