ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಲಂಗಾಣದ ಭದ್ರಾದ್ರಿ ಕೊಥಗುಡೆಂ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ 6 ನಕ್ಸಲರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಭದ್ರತಾ ಸಿಬ್ಬಂದಿಯೊಬ್ಬರು ಗಂಭೀರವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ತೆಲಂಗಾಣದ ಭದ್ರಾದ್ರಿ ಕೊತಗುಡಂ ಜಿಲ್ಲೆಯಲ್ಲಿ ಬೆಳಗ್ಗೆ ಪೊಲೀಸರು ನಕ್ಸಲರೊಂದಿಗೆ ಗುಂಡಿನ ಚಕಮಕಿ ನಡೆಸಿದ್ದಾರೆ.
ತೆಲಂಗಾಣದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಭದ್ರಾದ್ರಿ ಕೊತಗುಡೆಂ ಜಿಲ್ಲಾ ವರಿಷ್ಠಾಧಿಕಾರಿ ರೋಹಿತ್ ರಾಜ್ ಹೇಳಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.