Wednesday, December 7, 2022

Latest Posts

ಭದ್ರತಾ ಪಡೆಗಳೊಂದಿಗೆ ಗುಂಡಿನ ಕಾಳಗ, ಇಬ್ಬರು ನಕ್ಸಲೀಯರ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಡಿಶಾದ ಕೊರಾಪುತ್ ಜಿಲ್ಲೆಯಲ್ಲಿ ಭದ್ರತಾಪಡೆಗಳ ಗುಂಡಿನ ದಾಳಿಗೆ ಇಬ್ಬರು ನಕ್ಸಲೀಯರು ಮೃತಪಟ್ಟಿದ್ದಾರೆ. ರಾಮಗಿರಿ ಅರಣ್ಯ ಪ್ರದೇಶದಲ್ಲಿ 20 ನಕ್ಸಲೀಯರು ಇರುವ ಬಗ್ಗೆ ಮಾಹಿತಿ ತಿಳಿದಿದ್ದು, ಬಿಎಸ್‌ಎಫ್ ಮತ್ತು ವಿಶೇಷ ಭದ್ರತಾ ಪಡೆಯಿಂದ ಕಾರ್ಯಾಚರಣೆ ನಡೆದಿದೆ.

ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಮಾವೋವಾದಿಗಳನ್ನು ಹತ್ಯೆ ಮಾಡಲಾಗಿದೆ. ಕಾರ್ಯಾಚರಣೆ ನಡೆದ ಸ್ಥಳದಿಂದ ಬಾಂಬ್, ಗನ್, ಡಿಟೋನೇಟರ್, ಗಾಂಜಾ ಪ್ಯಾಕೆಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!