ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಉದ್ಧಂಪುರ ಜಿಲ್ಲೆಯ ದುಡು-ಬಸಂತ್‌ಗರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಉಗ್ರರೊಂದಿಗೆ ನಡೆಸುತ್ತಿರುವ ಎನ್‌ಕೌಂಟರ್‌ನಲ್ಲಿ ಸೇನಾ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಪಹಲ್ಗಾಮ್‌ನ ಬೈಸರನ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಸ್ಥಳೀಯ ನಿವಾಸಿಗಳು ಸಾವನ್ನಪ್ಪಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದರೆಡು ದಿನಗಳಲ್ಲಿ ನಡೆಯುತ್ತಿರುವ ಮೂರನೇ ಎನ್‌ಕೌಂಟರ್ ಇದಾಗಿದೆ.
ಉದ್ಧಂಪುರದ ದುಡಿ ಬಸಂತ್‌ಗಢ ಗ್ರಾಮದಲ್ಲಿ ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ ಎಂದು ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶಂಕಿತರು ಅಡಗಿದ್ದ ಸ್ಥಳದಲ್ಲಿ ಭದ್ರತಾ ಪಡೆಗಳು ಜಮಾಯಿಸುತ್ತಿದ್ದಂತೆಯೇ, ಉಗ್ರರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆಗಳು ಪ್ರತಿಯಾಗಿ ಗುಂಡಿನ ದಾಳಿ ನಡೆಸಿದ್ದು, ಎನ್ ಕೌಂಟರ್ ಆರಂಭವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.