ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭಾನುವಾರ ಸಂಜೆ ಭದ್ರತಾ ಪಡೆ ಮತ್ತು ಉಗ್ರರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ.
ಹಿರಾನಗರ್ ಸೆಕ್ಟರ್‌ನ ಭಾರತ-ಪಾಕಿಸ್ತಾನ ಗಡಿ ಬಳಿಯ ಸನ್ಯಾಲ್ ಗ್ರಾಮದಲ್ಲಿ ಶಂಕಿತ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಎನ್‌ಕೌಂಟರ್ ನಡೆಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಸ್ಥಳಕ್ಕೆ ಹೆಚ್ಚಿನ ಭದ್ರತಾ ಪಡೆಯ ಸಿಬ್ಬಂದಿ ಧಾವಿಸಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ದೋಡಾದಲ್ಲಿ ಉಗ್ರರ ಅಡಗುದಾಣ ಪತ್ತೆ
ಭಾನುವಾರ ಬೆಳಗ್ಗೆ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿ ದೋಡಾ ಜಿಲ್ಲೆಯಲ್ಲಿ ಉಗ್ರರ ಬೃಹತ್ ಅಡಗುದಾಣವನ್ನು ಧ್ವಂಸ ಮಾಡಿ, ಅಲ್ಲಿದ್ದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿತ್ತು. ಭಯೋತ್ಪಾದಕರ ಅಡಗು ತಾಣದಿಂದ 1 ಪಿಸ್ತೂಲ್ ಮತ್ತು ಕೆಲವು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿತ್ತು.