ಭೀಮಾ ತೀರದಲ್ಲಿ ಗುಂಡಿನ ಸದ್ದು: ರೌಡಿಶೀಟರ್‌ ಸ್ಥಳದಲ್ಲೇ ಸಾವು

ಹೊಸದಿಗಂತ ವರದಿ, ವಿಜಯಪುರ:

ಭೀಮಾ ತೀರದಲ್ಲಿ ಗುಂಡಿನ ದಾಳಿ ನಡೆದು, ರೌಡಿಶೀಟರ್‌ ಮೃತಪಟ್ಟಿದ್ದಾನೆ.

ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ನೀವರಗಿ ರಸ್ತೆಯ ಮನೆ ಬಳಿ ಗುಂಡಿನ ದಾಳಿಗೆ ರೌಡಿಶೀಟರ್ ಮೃತಪಟ್ಟಿರುವ ಘಟನೆ ನಡೆದಿದೆ.

ಅಶೋಕ ಮಲ್ಲಪ್ಪ ಗಂಟಗಲ್ಲಿ ಮೃತ ರೌಡಿಶೀಟರ್.

ಅಶೋಕ ಗಂಟಗಲ್ಲಿ ಮನೆಯಿಂದ ಚಟಚಟಣ ಪಟ್ಟಣಕ್ಕೆ ಆಗಮಿಸುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿದ್ದು, ಅಶೋಕ‌ ಬೆನ್ನಿಗೆ ಮೂರಕ್ಕೂ ಅಧಿಕ ಗುಂಡಿಗಳು ತಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಅಶೋಕ ಗಂಟಗಲ್ಲಿ ಇತ್ತೀಚೆಗೆ ಜೈಲಿನಿಂದ ಪೆರೋಲ್ ಮೇಲೆ ಹೊರ ಬಂದಿದ್ದನು. ಆತ ಕೊಲೆ ಹಾಗೂ ಇತರೆ ಕೇಸ್ ಗಳಲ್ಲಿ ಅಪರಾಧಿಯಾಗಿದ್ದನು.
ಈತನ ಮೇಲಿನ ಹಳೆ ದ್ವೇಷದಿಂದ ಕೊಲೆ ಮಾಡಿರೋ ಸಂಶಯ ವ್ಯಕ್ತವಾಗಿದ್ದು, ಸ್ಥಳಕ್ಕೆ ಚಡಚಣ ಪೊಲೀಸರು ದೌಡಾಯಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!