ಅಮೆರಿಕದಲ್ಲಿ ನಡೆದ ಗುಂಡಿನ ದಾಳಿಗೆ ಮಗು ಸೇರಿದಂತೆ ಐವರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಮೆರಿಕದಲ್ಲಿ ಮತ್ತೊಮ್ಮೆ ಉಗ್ರ ಗುಂಡಿನ ದಾಳಿ ನಡೆದಿದ್ದು, ಐವರು ಸಾವನ್ನಪ್ಪಿದ್ದಾರೆ. ಟೆಕ್ಸಾಸ್‌ನ ಕ್ಲೀವ್‌ಲ್ಯಾಂಡ್‌ನಲ್ಲಿ ಈ ಘಟನೆ ನಡೆದಿದೆ. ದಾಳಿಕೋರ ಕುಟುಂಬವನ್ನು ಗುರಿಯಾಗಿಸಿಕೊಂಡಿದ್ದಾರೆ. ಪೊಲೀಸರ ಪ್ರಕಾರ ಶುಕ್ರವಾರ ತಡರಾತ್ರಿ ಗುಂಡಿನ ದಾಳಿ ನಡೆದಿದೆ. ಘಟನೆ ಬಳಿಕ ದಾಳಿಕೋರ ತಲೆಮರೆಸಿಕೊಂಡಿದ್ದಾನೆ.

ಮಾಧ್ಯಮ ವರದಿಗಳ ಪ್ರಕಾರ, ದಾಳಿಕೋರನು ತನ್ನ AR-15 ಗನ್‌ನೊಂದಿಗೆ ನೆರೆ-ಹೊರೆಯವರ ಹೊಲದಲ್ಲಿ ಶೂಟಿಂಗ್ ಅಭ್ಯಾಸ ಮಾಡುತ್ತಿದ್ದನು. ಮನೆಯಲ್ಲಿ ಮಗು ಮಲಗಿದೆ ಶೂಟಿಂಗ್ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ಈ ವಿಚಾರಕ್ಕೆ ಅವರ ನಡುವೆ ವಾಗ್ವಾದ ನಡೆದಿದೆ. ಕೋಪದ ಭರದಲ್ಲಿ, ವ್ಯಕ್ತಿ ಅವರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾನೆ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಕುರಿತು ಸುಮಾರು 11:31 p.m. ಕ್ಕೆ ಸ್ಯಾನ್ ಜೆಸಿಂಟೋ ಕೌಂಟಿ ಶೆರಿಫ್‌ನ ಅಧಿಕಾರಿಗಳು ಕ್ಲೀವ್‌ಲ್ಯಾಂಡ್‌ನಿಂದ ಕರೆ ಸ್ವೀಕರಿಸಿದರು. ಮೃತರಲ್ಲಿ ಮೂವರು ಮಹಿಳೆಯರು, ಒಬ್ಬ ಪುರುಷ ಮತ್ತು ಮಗು ಸೇರಿದೆ. ಬಲಿಯಾದವರು 8 ರಿಂದ 40 ವರ್ಷ ವಯಸ್ಸಿನವರು ವಯಸ್ಸು ಇದೆ ಎಂದು ಕೇಪರ್ಸ್ ಹೇಳಿದರು. ದಾಳಿಯಲ್ಲಿ 8 ವರ್ಷದ ಮಗು ಮತ್ತು ಮನೆಯಲ್ಲಿದ್ದ ಇತರ ನಾಲ್ವರು ಸಾವನ್ನಪ್ಪಿದ್ದಾರೆ. ಶೂಟರ್ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ಶಂಕಿತ ವ್ಯಕ್ತಿ ಮೆಕ್ಸಿಕನ್ ಪ್ರಜೆ ಎಂಬುದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!