ಹೊಸದಿಗಂತ ಡಿಜಿಟಲ್ ಡೆಸ್ಕ್
ಮಧ್ಯ ಆಫ್ರಿಕಾ ರಾಷ್ಟ್ರವಾದ ಕ್ಯಾಮರೂನ್ನ ಈಶಾನ್ಯ ಭಾಗದ ನಾಲ್ಕು ಗ್ರಾಮಗಳಲ್ಲಿ ಬಂದೂಕುಧಾರಿಯೊಬ್ಬ ನಡೆಸಿದ ಭೀಕರ ಗುಂಡಿನ ದಾಳಿಯಲ್ಲಿ ಏಳು ಜನರು ಸಾವನ್ನಪ್ಪಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಯಬ್ಬರು ತಿಳಿಸಿದ್ದಾರೆ.
ಎಕೆ 47 ಗನ್ ಹಾಗೂ ನಾಲ್ಕು ಮ್ಯಾಗಜೀನ್ಗಳೊಂದಿಗೆ ಹಳ್ಳಿಗಳ ಮೇಲೆ ದಾಳಿ ನಡೆಸಿದ ಬಂದೂಕುಧಾರಿ ನಾಲ್ಕು ಹಳ್ಳಿಗಳ ಮುಗ್ಧ ಜನರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾನೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮೂವರು ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ. ಬಂದೂಕುದಾರಿ ಪರಾರಿಯಾಗಿದ್ದು ದಾಳಿಗೆ ಕಾರಣ ತಿಳಿದುಬಂದಿಲ್ಲ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ