ಬೀದಿಯಲ್ಲಿ ಆಟವಾಡುತ್ತಿದ್ದವರ ಮೇಲೆ ಭೀಕರ ಗುಂಡಿನ ದಾಳಿ: ನಾಲ್ವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್ ಉಪನಗರದ ರಸ್ತೆಯ ಮೂಲೆಯಲ್ಲಿ ಆಡುತ್ತಿದ್ದ ಜನರ ಗುಂಪಿನ ಮೇಲೆ ಬಂದೂಕುಧಾರಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿ ನಾಲ್ವರನ್ನು ಕೊಂದುಹಾಕಿದ್ದಾರೆ.
ಭಾನುವಾರ ರಾತ್ರಿ 7.30ರ ಸುಮಾರಿಗೆ ಬೀದಿಯೊಂದರಲ್ಲಿ ಜನರ ಗುಂಪು ಆಡುತ್ತಿದ್ದಾಗ ಅಲ್ಲಿಗೆ ಬಂದ ಅಪರಿಚಿತ ದಾಳಿಕೋರರು ಭೀಕರ ಗುಂಡಿನ ದಾಳಿ ನಡೆಸಿದ್ದಾರೆ.ಘಟನೆಯಲ್ಲಿ ನಾಲ್ಕು ಜನರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ಹತ್ತಿರದ ಆಸ್ಪತ್ರೆಗೆ ದಾಳಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆ ಆರಂಭಿಸಲಾಗಿದ್ದು, ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!