ಲಾಸ್‌ವೇಗಸ್‌ನಲ್ಲಿ ಮತ್ತೆ ಗುಂಡಿನ ಸದ್ದು, ಸ್ಥಳದಲ್ಲೇ ಪ್ರಾಣಚೆಲ್ಲಿದ ಐವರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲಾಸ್‌ವೇಗಸ್‌ನಲ್ಲಿ ಮತ್ತೆ ಗುಂಡಿನ ದಾಳಿಯಾಗಿದ್ದು, ಐವರು ಮೃತಪಟ್ಟಿದ್ದಾರೆ. ಅಪಾರ್ಟ್‌ ಮೆಂಟ್‌ಗಳ ಮೇಲೆ ನಡೆದ ಗುಂಡಿನ ದಾಳಿ ಇದಾಗಿದ್ದು, ಒಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಗುಂಡಿನ ದಾಳಿ ನಡೆಸಿದ ಶಂಕಿತನನ್ನು ಎರಿಕ್ ಆಡಮ್ಸ್ ಎಂದು ಗುರುತಿಸಲಾಗಿದೆ. ಘಟನೆಯ ಬಳಿಕ ಈತನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಎರಿಕ್ ಆಡಮ್ಸ್ ಸೋಮವಾರ ತಡರಾತ್ರಿ ಅದೇ ಸಂಕೀರ್ಣದಲ್ಲಿರುವ ಎರಡು ನಾರ್ತ್ ಲಾಸ್ ವೇಗಾಸ್ ಅಪಾರ್ಟ್‌ಮೆಂಟ್‌ಗಳಲ್ಲಿ ನಾಲ್ವರು ಮಹಿಳೆಯರು ಮತ್ತು ಓರ್ವ ಪುರುಷನನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ಶಂಕಿಸಲಾಗಿದೆ. ಶಂಕಿತನ ಸುಳಿವಿನ ಮೇರೆಗೆ ಪೊಲೀಸರು ಆತನನ್ನು ಬಂಧಿಸಲು ತೆರಳಿದಾಗ ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ಬಳಿಕ ಶೂಟೌಟ್‌ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಯಾವ ಕಾರಣಕ್ಕಾಗಿ ಶೂಟೌಟ್‌ ನಡೆಸಿದ್ದಾನೆ ಎಂದು ತಿಳಿದುಬಂದಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!