ದಿಗಂತ ವರದಿ ಹುಬ್ಬಳ್ಳಿ:
ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ದರೋಡೆ ಪ್ರಕರಣದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶುಕ್ರವಾರ ಕಾರವಾರ ರಸ್ತೆ ಎಂ.ಟಿ.ಎಸ್. ಕಾಲೋನಿ ಬಳಿ ನಡೆದಿದೆ.
ನೇಕಾರ ನಗರದ ಸೋನು ನಾಯಕ ಎಂಬಾತನ ಮೇಲೆ ಉಪನಗರ ಪೊಲೀಸ್ ಠಾಣೆಯ ಅಧಿಕಾರಿ ಎಂ.ಎಸ್. ಹೂಗಾರ ಗುಂಡು ಹಾರಿಸಿದ್ದಾರೆ. ಗಾಯಗೊಂಡಿರುವ ಕಾನ್ ಸ್ಟೇಬಲ್ ಗಳಾದ ತರುಣ ಗಡ್ಡನವರ ಹಾಗೂ ಡಿ.ಆರ್. ಪಮ್ಮಾರ ಅವರನ್ನು ಕಿಮ್ಸ್ ಗೆ ದಾಖಲಿಸಲಾಗಿದೆ.
ಆರೋಪಿ ಸೇರಿದಂತೆ ನಾಲ್ವರು ಹುಬ್ಬಳ್ಳಿ ಹೊರ ವಲಯದಲ್ಲಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಮೈಮೇಲಿನ ಆಭರಣ ದೋಚಿದ್ದರು. ಈ ಪ್ರಕರಣ ಬೆನ್ನಟ್ಟಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು.
ಹೆಚ್ಚಿನ ವಿಚಾರಣೆ ಕರೆದೊಯ್ಯುವಾಗ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಆಗ ಇನ್ಸ್ ಪೆಕ್ಟರ್ ಎಂ.ಎಸ್. ಹೂಗಾರ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿ ಸೋನು ನಾಯಕ ಚಿಕಿತ್ಸೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಮನೆ ಆರೋಪಿ ವಿರುದ್ಧ ದರೋಡೆ ಸೇರಿದಂತೆ ವಿವಿಧ 12 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಶುಕ್ರವಾರವೂ ಇಂತಹದ್ದೇ ಪ್ರಕರಣಕ್ಕೆ ಸಂಬಂಧಿಸಿ ಅಂತರರಾಜ್ಯ ಕಳ್ಳನ ಮೇಲೆ ಪೊಲೀಸರು ಗುಂಡು ಹಾರಿಸಿದ್ದರು. ಈಗ ಮತ್ತೆ ನಗರದಲ್ಲಿ ಗುಂಡಿನ ಸದ್ದು ಕೇಳಿಬಂದಿದೆ.