ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೀರೆ ಕದಿಯುತ್ತಿದ್ದ ಆರೋಪಿಗಳನ್ನು ಪೊಲೀಸರು ಭರ್ಜರಿ ಬೇಟೆ ನಡೆಸಿ ಗುಂಟೂರಿನಲ್ಲಿ ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿರುವ ಬಟ್ಟೆ ಅಂಗಡಿಗಳಿಗೆ ಮದುವೆ ಜವಳಿ ಹೆಸರಿನಲ್ಲಿ ತೆರಳಿ ಲಕ್ಷಾಂತರ ರೂ. ಮೌಲ್ಯದ ಸೀರೆಯನ್ನು ಕದಿಯುತ್ತಿದ್ದ ಗುಂಟೂರು ಗ್ಯಾಂಗ್ ನ ಮೂವರು ಸದಸ್ಯರನ್ನು ಬೆಂಗಳೂರಿನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಈಗಾಗಲೇ ಪೊಲೀಸರು ಗುಂಟೂರು ಗ್ಯಾಂಗ್ ನ ಹಲವು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದರು. ವಿಚಾರಣೆ ವೇಳೆ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ರಮಣ, ಚುಕ್ಕಮ್ಮ, ರತ್ನಾಲು ಎನ್ನುವ ಆರೋಪಿಗಳನ್ನು ಇದೀಗ ಬಂಧಿಸಿದ್ದಾರೆ.
ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅಶೋಕನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.