ಪೆರೋಲ್‌ ಮೇಲೆ ಹೊರಬಂದು ಕೇಕ್ ಕತ್ತರಿಸಿ ಸಂಭ್ರಮಿಸಿದ ಗುರ್ಮಿತ್‌ ರಾಮ್‌ ರಹೀಮ್‌ ಸಿಂಗ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

40 ದಿನಗಳ ಪೆರೋಲ್‌ ಮೇಲೆ ಜೈಲಿನಿಂದ ಹೊರಬಂದ ಡೇರಾ ಸಚ್ಛಾಸೌಧದ (Dera Sacha Sauda) ಮುಖ್ಯಸ್ಥ ಗುರ್ಮಿತ್‌ ರಾಮ್‌ ರಹೀಮ್‌ ಸಿಂಗ್‌ಗೆ ಕೇಕ್‌ ಕತ್ತರಿಸಿ ಸಂಭ್ರಮಿಸಿದ್ದಾರೆ.

ಆಶ್ರಮದಲ್ಲಿ ಇಬ್ಬರು ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರ್ಮಿತ್‌ ಸಿಂಗ್‌ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
ಅವರು ಜಾಮೀನು ಅರ್ಜಿಯಲ್ಲಿ ಜನವರಿ 25 ರಂದು ಮಾಜಿ ಡೇರಾ ಮುಖ್ಯಸ್ಥ ಷಾ ಸತ್ನಾಮ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಅವಕಾಶಕ್ಕೆ ಕೋರಿದ್ದರು.

ಹೀಗಾಗಿ ಸಿಂಗ್‌ಗೆ ಮೂರು ದಿನಗಳ ಹಿಂದೆ ಪೆರೋಲ್‌ ಮಂಜೂರು ಮಾಡಲಾಗಿತ್ತು.

ಇದೀಗ ಸಿಂಗ್‌ ಕೇಕ್‌ ಕತ್ತರಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಐದು ವರ್ಷಗಳ ನಂತರ ಈ ರೀತಿ ಆಚರಿಸಲು ಅವಕಾಶ ಸಿಕ್ಕಿದೆ. ಹಾಗಾಗಿ ಕನಿಷ್ಠ ಐದು ಕೇಕ್‌ಗಳನ್ನಾದರೂ ಕತ್ತರಿಸಬೇಕು. ಇದು ಮೊದಲ ಕೇಕ್ ಎಂದು ವೀಡಿಯೋ ಸಿಂಗ್‌ ಹೇಳಿಕೊಂಡಿದ್ದಾರೆ.

ಇದೀಗ ಶಸ್ತ್ರಾಸ್ತ್ರಗಳ ಕಾಯಿದೆಯ ಅಡಿಯಲ್ಲಿ ಶಸ್ತ್ರಾಸ್ತ್ರಗಳ ಸಾರ್ವಜನಿಕ ಪ್ರದರ್ಶನ (ಕತ್ತಿಯಿಂದ ಕೇಕ್ ಕತ್ತರಿಸುವುದು) ನಿಷೇಧಿಸಲಾಗಿದೆ.

ಕಳೆದ 14 ತಿಂಗಳಲ್ಲಿ ಇದು ನಾಲ್ಕನೇ ಬಾರಿ ಮತ್ತು ಮೂರು ತಿಂಗಳೊಳಗೆ ಎರಡನೇ ಬಾರಿಗೆ ರಾಮ್ ರಹೀಮ್‌ಗೆ ಪೆರೋಲ್ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!