ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಂಗಭದ್ರಾ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಟ್ಟಿದ್ದರಿಂದ ಗುರುರಾಘವೇಂದ್ರ ಸ್ವಾಮಿಗಳ ಏಕಶಿಲಾ ಬೃಂದಾವನ ಜಲಾವೃತಗೊಂಡಿದ್ದು, ರಾಯರ ಜಪ ಕಟ್ಟೆ ಕೂಡ ಜಲಾವೃತಗೊಂಡಿದೆ.
ರಾಯಚೂರು ತಾಲೂಕಿನ ಎಲೆಬಿಚ್ಚಾಲಿ ಗ್ರಾಮದಲ್ಲಿರುವ ರಾಯರ ಏಕಶಿಲಾ ಬೃಂದಾವನ ಜಲಾವೃತಗೊಂಡಿದೆ. ತುಂಗಭದ್ರಾ ನದಿ ಉಕ್ಕಿ ಹರಿದು ಬಿಚ್ಚಾಲಮ್ಮ ದೇವಿ ದೇವಸ್ಥಾನದ ಬಳಿ ಇರುವ ರಾಯರ ಬೃಂದಾವನಕ್ಕೆ ನೀರು ನುಗ್ಗಿದೆ.
ಏಕಶಿಲಾ ಬೃಂದಾವನಕ್ಕೆ ಭಕ್ತರು ಭೇಟಿ ನೀಡಿ ದರ್ಶನ ಪಡೆಯಲು ಸಾಹಸಪಡುತ್ತಿದ್ದಾರೆ. ಅರ್ಚಕರು ರಾಯರ ಬೃಂದಾವನಕ್ಕೆ ನೀರಿನಲ್ಲೇ ತೆರಳಿ ಪೂಜೆ, ಅಭಿಷೇಕ ಮಾಡುತ್ತಿದ್ದಾರೆ.