ಆನಂದಕಂದ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ಇನ್ನಿಲ್ಲ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ಅವರು ನಿನ್ನೆ ತಡರಾತ್ರಿ ಧಾರವಾಡದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಧಾರವಾಡದ ಸಪ್ತಾಪೂರದ ದುರ್ಗಾ ಕಾಲೋನಿಯ ಸ್ವಗೃಹದಲ್ಲಿ ಅಂತಿಮ ದರುಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅನಾರೋಗ್ಯದಿಂದಾಗಿ ಗುರುಲಿಂಗ ಕಾಪಸೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಿನ್ನ ತಡರಾತ್ರಿ ಆಸ್ಪತ್ರೆಯಲ್ಲಿಯೇ ನಿಧನರಾಗಿದ್ದಾರೆ. ಅವರಿಗೆ ೯೬ ವರ್ಷವಾಗಿತ್ತು.

ಕಾಪಸೆಯವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. 1945ರಲ್ಲಿ ತಮ್ಮ 18ನೇ ವಯಸ್ಸಿನಲ್ಲಿಯೇ ತಮ್ಮೂರಿನಲ್ಲಿ ಶಿಕ್ಷಕರಾಗಿ ಸೇವೆ ಆರಂಭ ಮಾಡಿದ ಕಾಪಸೆ ಕಾಲಾಂತರದಲ್ಲಿ ಧಾರವಾಡಕ್ಕೆ ಬಂದು ನೆಲೆಸಿದ್ದರು.

ಮಕ್ಕಳ ಸಾಹಿತ್ಯದಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದ ಕಾಪಸೆ ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮಧುರ ಚೆನ್ನರ ಜೀವನ ಹಾಗೂ ಕೃತಿಗಳ ಕುರಿತ ಮಹಾಪ್ರಬಂಧ ರಚಿಸಿದ್ದರು. ಮಧುರ ಚೆನ್ನ, ಅಕ್ಕಮಹಾದೇವಿ, ಅರವಿಂದರು, ಬಸವೇಶ್ವರ, ಹಲಸಂಗಿ ಗೆಳೆಯರು ಸೇರಿ ಹಲವು ಕೃತಿಗಳನ್ನು ರಚಿಸಿದ್ದಾರೆ. ಮರಾಠಿಯಿಂದ ಅನೇಕ ಕೃತಿಗಳನ್ನು ಕನ್ನಡ ಅನುವಾದ ಮಾಡಿದ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ. ಮಕ್ಕಳ ಸಾಹಿತ್ಯದಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಕಾಪಸೆಯವರು ದ.ರಾ.ಬೇಂದ್ರೆ, ಮಧುರ ಚೆನ್ನ ಸೇರಿ ಹಲವು ಸಾಹಿತಿಗಳ ಒಡನಾಡಿಯಾಗಿದ್ದರು.

ಆನಂದಕಂದ ಪ್ರಶಸ್ತಿ, ವರದರಾಜ ಆದ್ಯ ಪ್ರಶಸ್ತಿ, ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಮೊದಲಾದ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!