ಆದಿಚುಂಚನಗಿರಿ ಹಾಸನ ಶಾಖಾಮಠದಲ್ಲಿ‌ ಅರ್ಥಪೂರ್ಣ ಗುರುಪೂರ್ಣಿಮೆ ಆಚರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಾಸನ ನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಆವರಣದಲ್ಲಿ ಆಯೋಜಿಸಲಾಗಿದ್ದ ಗುರು ತೋರಿದ ದಾರಿ ತಿಂಗಳ ಮಾಮನ ತೇರಿನ ಹುಣ್ಣಿಮೆಯ 93ನೇ ಹುಣ್ಣಿಮೆ ಹಾಗೂ ಗುರು ಪೂರ್ಣಿಮ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಆಶೀರ್ವಚನ ನೀಡಿದರು.

ಇದೇ ಸಂದರ್ಭದಲ್ಲಿ ಸಂಸ್ಕೃತ ಮತ್ತು ಸಂಸ್ಕೃತಿಗೆ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಕೊಡುಗೆ ಎಂಬ ಪ್ರೌಢ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಪಡೆದಿರುವ ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಗೆ ಪೂಜ್ಯ ಮಹಾ ಸ್ವಾಮೀಜಿಯವರು ಗೌರವಿಸಿ ಆಶೀರ್ವದಿಸಿದರು.

ಸಮಾರಂಭದಲ್ಲಿ ಪೂಜ್ಯ ಶ್ರೀ ಶಂಭುನಾಥ ಸ್ವಾಮೀಜಿ, ಪೂಜ್ಯ ಶ್ರೀ ಶಿವಲಿಂಗಸ್ವಾಮೀಜಿ, ಪೂಜೆ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ ಪೂಜ್ಯ ಸ್ವಾಮೀಜಿಗಳವರು, ಶಾಸಕರುಗಳಾದ ಕೆ.ಜಿ. ಬೋಪಯ್ಯ, ಎಚ್. ಕೆ. ಕುಮಾರಸ್ವಾಮಿ, ಲಿಂಗೇಶ್, ಎ. ಟಿ. ರಾಮಸ್ವಾಮಿ, ಸ್ಥಳೀಯ ಮುಖಂಡರು, ಗಣ್ಯರು ಹಾಗೂ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!