ಹೊಸದಿಗಂತ ಡಿಜಿಟಲ್ ಡೆಸ್ಕ್:
ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ.
ಕಳೆದ ವರ್ಷದ ಮಾರ್ಚ್‌ನಲ್ಲಿ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕಗೊಂಡಿದ್ದರು. ಇದೀಗ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕವಾಗಿದ್ದು, ನಿರ್ಗಮಿತ ಆಯುಕ್ತ ರಾಜೀವ್ ಕುಮಾರ್ ಅವರ ಸ್ಥಾನವನ್ನು ತುಂಬಲಿದ್ದಾರೆ.
ರಾಹುಲ್ ಗಾಂಧಿ ವಿರೋಧದ ನಡುವೆಯೂ ಜ್ಞಾನೇಶ್ ಕುಮಾರ್ ಅವರನ್ನು ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಲಾಗಿದೆ.