ಜ್ಞಾನವಾಪಿ ಪ್ರಕರಣ: ಶಿವಲಿಂಗ ಪೂಜೆ ಕುರಿತು ಇಂದು ಮಹತ್ವದ ತೀರ್ಪು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗವನ್ನು ಪೂಜಿಸಲು ಅನುಮತಿ ಕೋರಿ ಹಿಂದೂಗಳು ಸಲ್ಲಿಸಿರುವ ಅರ್ಜಿಯ ಬಗ್ಗೆ ವಾರಣಾಸಿಯ ತ್ವರಿತ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಲಿದೆ.
ಸ್ವಯಂಭೂ ಜ್ಯೋತಿರ್ಲಿಂಗ ಭಗವಾನ್ ವಿಶ್ವೇಶ್ವರನ ಪ್ರಾರ್ಥನೆಗೆ ತಕ್ಷಣದ ಅನುಮತಿ, ಸಂಪೂರ್ಣ ಜ್ಞಾನವಾಪಿ ಸಂಕೀರ್ಣವನ್ನು ಹಿಂದೂಗಳಿಗೆ ಹಸ್ತಾಂತರಿಸುವುದು ಮತ್ತು ಜ್ಞಾನವಾಪಿ ಸಂಕೀರ್ಣದ ಆವರಣದೊಳಗೆ ಮುಸ್ಲೀಮರ ಪ್ರವೇಶ ನಿಷೇಧಿಸುವುದು ಸೇರಿದಂತೆ ಫಿರ್ಯಾದಿದಾರರ ಮೂರು ಪ್ರಮುಖ ಬೇಡಿಕೆಗಳ ಕುರಿತು ನ್ಯಾಯಾಲಯವು ತನ್ನ ತೀರ್ಪು ನೀಡಲಿದೆ. ಅಕ್ಟೋಬರ್‌ನಲ್ಲಿ ನಡೆದ ಹಿಂದಿನ ವಿಚಾರಣೆಯ ಸಂದರ್ಭದಲ್ಲಿ, ವಾರಣಾಸಿ ನ್ಯಾಯಾಲಯವು ಶಿವಲಿಂಗದ ವೈಜ್ಞಾನಿಕ ತನಿಖೆಗೆ ಅನುಮತಿ ನೀಡಲು ನಿರಾಕರಿಸಿತ್ತು.
ಸೆಪ್ಟೆಂಬರ್ 29 ರಂದು ನಡೆದಿದ್ದ ವಿಚಾರಣೆ ವೇಳೆ, ಹಿಂದೂಗಳ ಕಡೆಯವರು ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ (ASI) ಮೂಲಕ “ಶಿವಲಿಂಗ” ದ ವೈಜ್ಞಾನಿಕ ತನಿಖೆ ಮತ್ತು “ಅರ್ಘಾ” ಮತ್ತು ಅದರ ಸುತ್ತಲಿನ ಪ್ರದೇಶದ ಕಾರ್ಬನ್ ಡೇಟಿಂಗ್ ಅನ್ನು ಒತ್ತಾಯಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!