Thursday, February 9, 2023

Latest Posts

ದೆಹಲಿಯ ಪ್ರೀತ್ ವಿಹಾರ್‌ನಲ್ಲಿ ಜಿಮ್ ಮಾಲೀಕನನ್ನು ಗುಂಡಿಕ್ಕಿ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶುಕ್ರವಾರ ರಾತ್ರಿ ಪೂರ್ವ ದೆಹಲಿಯ ಪ್ರೀತ್ ವಿಹಾರ್‌ನಲ್ಲಿ ಜಿಮ್ ಮಾಲೀಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ದೆಹಲಿ ಪೊಲೀಸರ ಪ್ರಕಾರ, ಘಟನೆ ರಾತ್ರಿ 7:30 ರ ಸುಮಾರಿಗೆ ಸಂಭವಿಸಿದೆ. ಮೃತನನ್ನು ಮಹಿಂದರ್ ಎಂದು ಗುರುತಿಸಲಾಗಿದ್ದು, ಆರೋಪಿಗಳಿಗಾಘಿ ಬಲೆ ಬೀಸಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ರಾತ್ರಿ 7:30 ರ ಸುಮಾರಿಗೆ ಮಹೀಂದರ್ ಎಂಬ ಜಿಮ್ ಮಾಲೀಕನನ್ನು ಪ್ರೀತ್ ವಿಹಾರ್‌ನಲ್ಲಿರುವ ಅವರ ಕಚೇರಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಗುಂಡಿಕ್ಕಿ ಕೊಂದಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ” ಎಂದು ದೆಹಲಿ ಪೂರ್ವ ಉಪ ಪೊಲೀಸ್ ಆಯುಕ್ತೆ ಅಮೃತ ಗುಗುಲೋತ್ ಹೇಳಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!