ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದಿಂದ ಹೊರಗಿರುವ H-1B Visa ಹೊಂದಿರುವ ತಮ್ಮ ಉದ್ಯೋಗಿಗಳಿಗೆ 24 ಗಂಟೆಯೊಳಗೆ ಯುಎಸ್‌ಗೆ ವಾಪಸ್ ಬನ್ನಿ ಎಂದು ಮೆಟಾ, ಮೈಕ್ರೋಸಾಫ್ಟ್‌ನಂತಹ ಪ್ರಮುಖ ಕಂಪನಿಗಳು ಸೂಚನೆ ನೀಡಿವೆ.
ವಲಸಿಗರ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಹೆಚ್-1ಬಿ ವೀಸಾ ವಾರ್ಷಿಕ ಶುಲ್ಕವನ್ನು 1 ಲಕ್ಷ ಡಾಲರ್‌ಗೆ ಹೆಚ್ಚಿಸಿ ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಅಮೆರಿಕದ ಹೊರಗೆ ವಾಸಿಸುತ್ತಿರುವ ತಮ್ಮ ಉದ್ಯೋಗಿಗಳಿಗೆ ಮರುಪ್ರವೇಶ ನಿರಾಕರಣೆಯನ್ನು ತಪ್ಪಿಸಲು 24 ಗಂಟೆಗಳ ಒಳಗೆ ದೇಶಕ್ಕೆ ಮರಳುವಂತೆ ಒತ್ತಾಯಿಸಿವೆ. ಎಲ್ಲಾ H-1B ವೀಸಾ ಹೊಂದಿರುವವರು ಕನಿಷ್ಠ 14 ದಿನಗಳ ವರೆಗೆ ಅಮೆರಿಕವನ್ನು ತೊರೆಯದಂತೆ ಒತ್ತಾಯಿಸಿವೆ.