ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿ (Bellary)- ಬೆಂಗಳೂರು ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ನಲ್ಲಿ (Jewelery shop) ಶಾರ್ಟ್ ಸರ್ಕ್ಯೂಟ್ನಿಂದ ಎಸಿ ಸ್ಫೋಟಗೊಂಡ (AC Blast) ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಏಕಾಏಕಿ ಎಸಿ ಬ್ಲಾಸ್ಟ್ ಆದ ಪರಿಣಾಮ ಮಳಿಗೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಸ್ಫೋಟದ ತೀವ್ರತೆಗೆ ಕಿಟಕಿ ಗಾಜುಗಳು ಒಡೆದು ಹೋಗಿವೆ. ಅಲ್ಲದೇ ಮಳಿಗೆಯಲ್ಲಿ ದಟ್ಟ ಹೊಗೆ ಆವರಿಸಿದೆ. ಇ
ಗಾಯಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ಗಾಯಾಳುವಿನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.