January18, 2026
Sunday, January 18, 2026
spot_img

ಪ್ರಧಾನಿ ಮೋದಿಗೆ ಪತ್ರ ಬರೆದ ಹೆಚ್​​.ಡಿ ದೇವೇಗೌಡ: ಜಪಾನ್, ಚೀನಾ ಪ್ರವಾಸಕ್ಕೆ ಮೆಚ್ಚುಗೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಪಾನ್, ಚೀನಾ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿಗೆ ಮಾಜಿ ಪ್ರಧಾನಿ ಹೆಚ್​​.ಡಿ ದೇವೇಗೌಡ ಪತ್ರ ಬರೆಯುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹೆಚ್​​.ಡಿ ದೇವೇಗೌಡ ಬರೆದ ಪತ್ರದಲ್ಲೇನಿದೆ?
ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮ ಚೀನಾ ಪ್ರವಾಸವನ್ನು ನಾನು ಸೂಕ್ಷ್ಮವಾಗಿ ಗಮನಿಸಿದ್ದೇವೆ. ಭಾರತದ ಮೇಲೆ ಅಮೆರಿಕ ಹೇರುತ್ತಿರುವ ಸುಂಕ ಯುದ್ಧಕ್ಕೆ ಪರ್ಯಾಯ ಮಾರ್ಗ ಕಂಡುಕೊಳ್ಳುತ್ತಿದ್ದಿರಿ. ಹೀಗಾಗಿ ನಿಮ್ಮ ಮೇಲೆ ಭಾರತದ ಲಕ್ಷಾಂತರ ಜನ ವಿಶ್ವಾಸವಿಟ್ಟಿದ್ದಾರೆ. ರಷ್ಯಾ, ಚೀನಾ ಅಧ್ಯಕ್ಷರ ಜತೆ ನಿಮ್ಮ ಸ್ನೇಹ ಜಗತ್ತಿಗೆ ಹೊಸ ಸಂದೇಶ ನೀಡಿದೆ. ಉಕ್ರೇನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ನೀವು ಅಧ್ಯಕ್ಷ ಪುಟಿನ್ ಅವರೊಂದಿಗೆ ಮಾತನಾಡಿದ್ದಕ್ಕೆ ನನಗೆ ಸಂತೋಷವಾಗಿದೆ. ನೀವು ಅನುಸರಿಸುತ್ತಿರುವ ನೀತಿಗಳು ಸಮೃದ್ಧ ಭಾರತ ನಿರ್ಮಾಣಕ್ಕೆ ಸಹಕಾರ ಆಗಲಿದೆ ಎಂದಿದ್ದಾರೆ.

ಅಧ್ಯಕ್ಷ ಪುಟಿನ್ ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗಿನ ನಿಮ್ಮ ಛಾಯಾಚಿತ್ರಗಳು ಮತ್ತು ವಿಡಿಯೋಗಳು ಜಗತ್ತಿನಾದ್ಯಂತ ಮಾಧ್ಯಮಗಳಲ್ಲಿ ತುಂಬಿ ತುಳುಕುತ್ತಿದ್ದು, ರಾಷ್ಟ್ರಗಳ ಮುಖ್ಯಸ್ಥರ ನಡುವಿನ ಸ್ನೇಹವನ್ನು ಮೀರುಸುತ್ತದೆ. ಇದು ಹೊಸ ಜಾಗೃತಿಯನ್ನು ಮತ್ತು ಬಹುಶಃ ಭಾರತವನ್ನು ಜಾಗತಿಕ ಸಮೃದ್ಧಿ ಮತ್ತು ಶಾಂತಿಯ ಮಧ್ಯದಲ್ಲಿ ಇರಿಸುವ ಹೊಸ ವಿಶ್ವ ಕ್ರಮದ ಆರಂಭವನ್ನು ಸಂಕೇತಿಸುತ್ತದೆ. ಭಾರತದ ಮುಂದಿರುವ ಸವಾಲನ್ನು ಯಾವುದೇ ಮೂಲ ಮೌಲ್ಯಗಳನ್ನು ತ್ಯಾಗ ಮಾಡದೆ, ಅವಕಾಶವನ್ನಾಗಿ ಪರಿವರ್ತಿಸಲು ನೀವು ದೃಢನಿಶ್ಚಯ ಮಾಡಿದ್ದೀರಿ ಎಂದು ತಿಳಿದು ನನಗೆ ಸಂತೋಷವಾಗಿದೆ. ದೇವರು ನಿಮಗೆ ಹೆಚ್ಚಿನ ಶಕ್ತಿ ಮತ್ತು ಉತ್ತಮ ಆರೋಗ್ಯವನ್ನು ನೀಡಲಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

https://x.com/H_D_Devegowda/status/1963152934805381616?ref_src=twsrc%5Etfw%7Ctwcamp%5Etweetembed%7Ctwterm%5E1963152934805381616%7Ctwgr%5Eae7735c88b0c645ad0abdc874de8dce924e8e003%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fformer-prime-minister-hd-deve-gowda-appreciates-pm-modis-visits-to-japan-and-china-1075728.html

Must Read

error: Content is protected !!