ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಅವರಿಗೆ ಕೊರೋನಾ ಸೊಂಕು ದೃಢಪಟ್ಟಿದೆ.
ಸೋಂಕಿಗೆ ತುತ್ತಾಗಿರುವ ಹೆಚ್.ಡಿ. ದೇವೇಹಗೌಡರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಕೋವಿಡ್ 2ನೇ ಅಲೆಯ ಸಮಯಸಲ್ಲಿ ದೇವೇಗೌಡ ದಂಪತಿಗೆ ಸೋಂಕು ತಗುಲಿತ್ತು, ಈಗ ಕೆಮ್ಮು ಇದ್ದ ಹಿನ್ನೆಲೆಯಲ್ಲಿ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ನಿನ್ನೆ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೆಚ್.ಡಿ. ದೇವೇಗೌಡ ಅವರು ಶೀಘ್ರ ಗುಣಮುಖರಾಗಲಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಟ್ವೀಟ್ ಮಾಡಿದ್ದು, ಮಾಜಿ ಪ್ರಧಾನಿ ಮಂತ್ರಿ ಹೆಚ್. ಡಿ. ದೇವೇಗೌಡ ಅವರು ಕೋವಿಡ್ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.