ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರನ್ನು ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರು ಭೇಟಿ ಮಾಡಿ, ಯೋಗಕ್ಷೇಮ ವಿಚಾರಿಸಿದರು.
ಬೆಂಗಳೂರಿನ ಪದ್ಮನಾಭನಗರದ ಗೌಡರ ನಿವಾಸಕ್ಕೆ ಇಂದು ಭೇಟಿ ನೀಡಿದ ವೀರೇಂದ್ರ ಹೆಗ್ಗಡೆ, ಗೌಡರ ಯೋಗಕ್ಷೇಮ ವಿಚಾರಿಸಿ ಶುಭಹಾರೈಸಿದರು.
ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಚರ್ಚಿಸಿದ ಗೌಡರು, ರಾಜ್ಯಸಭೆಗೆ ಆಯ್ಕೆಯಾದ ವೀರೇಂದ್ರ ಹೆಗ್ಗಡೆ ಅವರಿಗೆ ಶುಭಕೋರಿದರು. ಈ ವೇಳೆ ದೇವೇಗೌಡರ ಪತ್ನಿ ಚನ್ನಮ್ಮ, ಧರ್ಮಸ್ಥಳದ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಡಾ. ಸುರೇಂದ್ರ ಕುಮಾರ್ ಅವರು ಹಾಜರಿದ್ದರು.