ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾತಿಗಣತಿ ಗೊಂದಲ ಸಂಬಂಧ ಇಂದು ನಡೆದ ಒಕ್ಕಲಿಗ ಸಮುದಾಯದ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಮುಖಾಮುಖಿಯಾಗಿದ್ದಾರೆ.
ಆದಿಚುಂಚಗಿರಿ ಶ್ರೀಗಳಾದ ನಿರ್ಮಲಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಡಿಕೆಶಿ ಮತ್ತು ಹೆಚ್‌ಡಿಕೆ ಇಬ್ಬರೂ ಮುಖಾಮುಖಿಯಾದರು. ಈ ವೇಳೆ ಕುರ್ಚಿಯಲ್ಲಿ ಕುಳಿತಿದ್ದ ಡಿಕೆಶಿಗೆ ಕೈಮುಗಿದು ಹೆಚ್‌ಡಿಕೆ ನಮಸ್ಕರಿಸಿದರು. ಡಿಸಿಎಂ ಕೂಡ ಪ್ರತಿಯಾಗಿ ನಮಸ್ಕರಿಸಿದರು.
ಜಾತಿಗಣತಿ ಸಂಬಂಧ ಒಕ್ಕಲಿಗರ ಸಭೆಯಲ್ಲಿ ಹಲವಾರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. 60 ದಿನ ಜಾತಿಗಣತಿ ಮುಂದೂಡಿ, 15 ದಿನ ಕಾಲಮಿತಿಯನ್ನು ಹೆಚ್ಚು ಮಾಡಿ ಅಂತಾ ಸರ್ಕಾರಕ್ಕೆ ಒತ್ತಾಯಿಸಿ ನಿರ್ಣಯ ಮಾಡಲಾಗಿದೆ.