ಹೆಚ್.ಡಿ.ರೇವಣ್ಣ ಶಾಸಕ ಸ್ಥಾನಕ್ಕೆ ಕುತ್ತು: ಹೈಕೋರ್ಟ್ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅಸಿಂಧು ಬೆನ್ನಲ್ಲೇ, ಶಾಸಕ ಹೆಚ್.ಡಿ.ರೇವಣ್ಣ ಸ್ಥಾನಕ್ಕೂ ಕುತ್ತು ಬಂದಿದ್ದು, ಹೈಕೋರ್ಟ್ ಸಮನ್ಸ್ ಜಾರಿಗೆ ಆದೇಶ ನೀಡಿದೆ.

ಪರಾಜಿತ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ, ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ ದೇವರಾಜೇಗೌಡ ವಿರುದ್ಧ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೂ ಸಮನ್ಸ್ ಜಾರಿ ಮಾಡುವಂತೆ ಆದೇಶ ಹೊರಡಿಸಿದೆ.

ವಿಧಾನಸಭೆ ಕಾರ್ಯದರ್ಶಿ ಮೂಲಕ ಸಮನ್ಸ್ ಜಾರಿ ಮಾಡಲು ಹೈಕೋರ್ಟ್ ಆದೇಶ ಹೊರಡಿಸಿದೆ. ಚುನಾವಣಾ ಅಕ್ರಮದ ಮೂಲಕ ಹೆಚ್.ಡಿ.ರೇವಣ್ಣ ಜಯಗಳಿಸಿದ್ದಾರೆ. 2ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಮತದಾರರಿಗೆ ಆಮಿಷವೊಡ್ಡಿದ್ದಾರೆ. ಹಾಗಾಗಿ ಇಬ್ಬರ ಮತಗಳಿಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ದೇವರಾಜೇಗೌಡ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!