‘ಗೋಹತ್ಯೆ’ ಬಗ್ಗೆ ನಿಲುವು ಸ್ಪಷ್ಟಪಡಿಸಿ ಗೋಪೂಜೆ ಮಾಡಿ: ಹೆಚ್.ಕೆ.ಮಾದಪ್ಪ

ಹೊಸದಿಗಂತ ವರದಿ ಶನಿವಾರಸಂತೆ:

ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಅವರ ನಿಲುವು ಸ್ಪಷ್ಟಪಡಿಸಿದ ನಂತರ ಗೋಪೂಜೆ ಮಾಡಿ ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸಬೇಕಿತ್ತು ಎಂದು ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುಲ್ಲೂರಿಕೊಪ್ಪ ಕೆ. ಮಾದಪ್ಪ ಹೇಳಿದ್ದಾರೆ.

ಪಟ್ಟಣದಲ್ಲಿ ಶನಿವಾರ ಬೆಳಗ್ಗೆ ಆಯೋಜಿಸಲಾಗಿದ್ಧ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಪ್ರಚಾರ ಸಭೆಯಲ್ಲಿ ಮಾತಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿಯಾಗಲಿ, ಬೇರೆ ಯಾರೇ ಆಗಲಿ ಗೋಪೂಜೆ ಮಾಡುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಕಾಂಗ್ರೆಸ್ ಪಕ್ಷದವರು ಗೋಪೂಜೆ ಮಾಡುವ ಮೊದಲು ಗೋಹತ್ಯಾ ನಿಷೇಧ ಕಾಯ್ದೆಯ ಬಗ್ಗೆ ಅವರ ನಿಲುವನ್ನು ಸ್ಪಷ್ಟಪಡಿಸಬೇಕು ಎಂದರು.

ಈಗಾಗಲೇ ಹಲವಾರು ಕಾಂಗ್ರೆಸ್ ನಾಯಕರು ಗೋಹತ್ಯಾ ನಿಷೇಧ ಕಾಯ್ದೆಯನ್ನು ರದ್ದು ಮಾಡುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತಾಂತರ ನಿಷೇಧ ಕಾಯ್ದೆಯನ್ನು ಕೂಡಾ ರದ್ದುಪಡಿಸುವ ಭರವಸೆ ನೀಡೊದ್ದಾರೆ. ಇದು ಅಲ್ಪಸಂಖ್ಯಾತರನ್ನು ಓಲೈಸುವ ತಂತ್ರವಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಶಾಸಕ ಅಪ್ಪಚ್ಚು ರಂಜನ್ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಭಾಗವಹಿಸಿದ್ಧರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!