August 4, 2026
Tuesday, August 4, 2026
spot_img

ಎಚ್‌.ಕೆ. ಪಾಟೀಲರಿಗೆ ಒಲಿಯದ ಸಚಿವ ಸ್ಥಾನ: ಗದಗ-ಬೆಟಗೇರಿ ನಗರಸಭೆ ಕಾಂಗ್ರೆಸ್ ಸದಸ್ಯರ ರಾಜೀನಾಮೆ

ಹೊಸದಿಗಂತ ವರದಿ ಗದಗ:

ಮಾಜಿ ಸಚಿವ, ಗದಗ ಮತಕ್ಷೇತ್ರದ ಶಾಸಕ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡದ ಹಿನ್ನಲೆಯಲ್ಲಿ ಗದಗ-ಬೆಟಗೇರಿ ನಗರದಭೆ ಕಾಂಗ್ರೆಸ್ ಸದಸ್ಯರು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರಿಗೆ ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದರು.

ಗದಗ-ಬೆಟಗೇರಿ ನಗರಸಭೆ 16 ಕಾಂಗ್ರೆಸ್ ಸದಸ್ಯರು, 5 ನಾಮನಿರ್ದೇಶಿತ ಸದಸ್ಯರು ಸೇರಿ ಒಟ್ಟು 21 ಜನ ಸದಸ್ಯರು ಜಿಲ್ಲಾಧಿಕಾರಿ ಅವರಿಗೆ ರಾಜೀನಾಮೆ ಸಲ್ಲಿಸಿದರು. ಅಲ್ಲದೇ, ರಾಜ್ಯ ಕಾಂಗ್ರೆಸ್ ಹಾಗೂ ಹೈಕಮಾಂಡ ವಿರುದ್ಧ ಆಕ್ರೋಶ ಹೊರಹಾಕಿದ ಸದಸ್ಯರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಬೇಡಿಕೆ ಇಟ್ಟರು.

ನಾಲ್ಕು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ, ಸಚಿವರಾಗಿ, ಹಿರಿಯ ರಾಜಕಾರಣಿಯಾಗಿ ರಾಜ್ಯದ ಅಭಿವೃದ್ಧಿಯಲ್ಲಿ ವಿಶೇಷ ಕೊಡುಗೆ ನೀಡಿದ್ದಾರೆ. ಅವರ ಸೇವೆಯನ್ನು ಸ್ಮರಿಸದೇ ಸಚಿವ ಸ್ಥಾನ ನೀಡದೇ ಅನ್ಯಾಯ ಮಾಡಿದ್ದರ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿರುವುದಾಗಿ ನಗರಸಭೆ ಸದಸ್ಯರು ತಿಳಿಸಿದರು.

ನಗರಸಭೆ ಸದಸ್ಯರಾದ ಕೃಷ್ಣಾ ಪರಾಪೂರ, ಸುರೇಶ ಕಟ್ಟಿಮನಿ, ಬರಕತಾಲಿ ಮುಲ್ಲಾ, ರವಿ ಕಮತರ, ಚಂದ್ರು ಕರಿಸೋಮನಗೌಡ್ರ, ಇಮ್ತಿಯಾಜ ಶಿರಹಟ್ಟಿ, ಪದ್ಮಾ ಕಟಗಿ, ಪರವೀನಬಾನು ಮುಲ್ಲಾ, ಶಕುಂತಲಾ ಅಕ್ಕಿ, ಜೈನುದ್ದೀನ ನಮಾಜಿ ಸೇರಿ ಅನೇಕರು ಇದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !