June 30, 2026
Tuesday, June 30, 2026
spot_img

ಕ್ರಾಸ್‌ ವೋಟಿಂಗ್‌ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಭಾವನಾತ್ಮಕ ಆಣೆ ಪ್ರಮಾಣ ಮಾಡಿದ ಹೆಚ್.ಕೆ ಸುರೇಶ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ (ಕ್ರಾಸ್ ವೋಟಿಂಗ್) ನಡೆದಿದೆ ಎಂಬ ಆರೋಪಗಳ ಬೆನ್ನಲ್ಲೇ, ಹಾಸನ ಜಿಲ್ಲೆಯ ಬೇಲೂರು ಕ್ಷೇತ್ರದ ಬಿಜೆಪಿ ಶಾಸಕ ಹೆಚ್.ಕೆ.ಸುರೇಶ್ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ್ದಾರೆ. ಬೆಳಗ್ಗೆ ಬೇಲೂರಿನಿಂದ ನೂರಾರು ಕಾರ್ಯಕರ್ತರ ಜತೆ ಹೊರಟ ಸುರೇಶ್‌ ಬೇಲೂರಿನ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಬಲಿ ಕಲ್ಲಿನ ಮೇಲೆ ಆಣೆ ಮಾಡಿದ್ದಾರೆ.ನಾನು ಅಡ್ಡ ಮತದಾನ ಮಾಡಿಲ್ಲ ಎಂದು ಶಾಸಕ ಹೆಚ್‌.ಕೆ.ಸುರೇಶ್‌ ಆಣೆ ಮಾಡಿದರು.

ಇದೀಗ ಮಂಜುನಾಥ ಸ್ವಾಮಿಯ ದರುಶನ ಪಡೆದ ಶಾಸಕರು, ದೇವರ ಮುಂದೆ ಮುಷ್ಟಿ ಕಾಣಿಕೆ ಹಾಕಿ ಪ್ರಾರ್ಥಿಸಿದರು. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ. ನಾನು ಈಗಲೂ, ಮುಂದೆಯೂ ಬಿಜೆಪಿಯಲ್ಲೇ ಇರುತ್ತೇನೆ. ಶಾಸಕನಾಗಿ ಆಯ್ಕೆಯಾದಾಗಿನಿಂದ ಕಾಯಾ ವಾಚಾ ಮನಸಾ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇನೆ ಎಂದು ದೇವರ ಎದುರು ಅಡ್ಡಮತದಾನದ ಅಪವಾದವನ್ನು ನಿರಾಕರಿಸಿ ಸುರೇಶ್ ಭಾವನಾತ್ಮಕವಾಗಿ ಪ್ರಮಾಣ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !