ಬಿಜೆಪಿ ಯಿಂದ ಕಾಂಗ್ರೆಸ್ ಗೆ ಎಚ್.ವಿಶ್ವನಾಥ್ ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ವಿಧಾನ ಪರಿಷತ್ ಬಿಜೆಪಿ ಸದಸ್ಯ ಎಚ್.ವಿಶ್ವನಾಥ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ರಾಜ್ಯ ರಾಜಕೀಯದಲ್ಲಿ ಬದಲಾವಣೆ ಗಾಳಿ ಬೀಸಿದಂತಿದೆ .
ಜೆಡಿಎಸ್ ನಲ್ಲಿ ಇದ್ದ .ವಿಶ್ವನಾಥ್ ಬಳಿಕ ಬಿಜೆಪಿ ಸೇರ್ಪಡೆಗೊಂಡಿದ್ದರು. ಇದೀಗ ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.
ಇತ್ತೀಚೆಗಷ್ಟೇ ವಿಪಕ್ಷ ನಾಯಕ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನ ಭೇಟಿ ಮಾಡಿದ್ದರು.
ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, ಯುವ ಕಾಂಗ್ರೆಸ್‌ನಲ್ಲಿ ನಾನೂ ವಿಶ್ವನಾಥ್ ಒಟ್ಟಿಗೆ ಕೆಲಸ ಮಾಡಿದ್ದೆವು. ಸಂಪುಟದಲ್ಲೂ ಕೆಲಸ ಮಾಡಿದ್ದೇವೆ. ಅವರು ಇಂಡಿಪೆಂಡೆಂಟ್ ಮ್ಯಾನ್ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!