ಕಾಂಗ್ರೆಸ್ ಸೇರ್ಪಡೆಯಾದ ಹೆಚ್. ನಾಗೇಶ್ , YSV ದತ್ತಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಮತ್ತೆ ಪಕ್ಷಾಂತರ ಪರ್ವ ಶುರುವಾಗಿದ್ದು, ಪಕ್ಷೇತರ ಶಾಸಕ ಹೆಚ್.ನಾಗೇಶ್ ಹಾಗೂ ಜೆಡಿಎಸ್ ಪಕ್ಷದ ನಾಯಕ ವೈಎಸ್ ವಿ ದತ್ತಾ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶಾಸಕ ಹೆಚ್. ನಾಗೇಶ್, ವೈಎಸ್ ವಿ ದತ್ತಾ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ , ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ನಾಗೇಶ್ ಮುಂದಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗುವ ನಿರೀಕ್ಷೆ ಇದೆ. ಇನ್ನು ಜೆಡಿಎಸ್ ನಾಯಕ ವೈಎಸ್ ವಿ ದತ್ತಾ ಅವರು ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದು, ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!