ಬ್ಯಾಂಕ್ ಸರ್ವರ್ ಹ್ಯಾಕ್ ಮಾಡಿ 12 ಕೋಟಿ ರೂ. ಕದ್ದ ಖದೀಮರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೆಲಂಗಾಣದ ಹೈದರಾಬಾದ್‌ನಲ್ಲಿ ಸಹಕಾರಿ ಬ್ಯಾಂಕ್‌ನ ಸರ್ವರ್‌ಗಳನ್ನು ಸೈಬರ್ ಖದೀಮರು ಹ್ಯಾಕ್ ಮಾಡಿದ್ದು, ಬರೋಬ್ಬರಿ 12 ಕೋಟಿ ರೂಪಾಯಿ ಲೂಟಿ ಮಾಡಿದ್ದಾರೆ.

ಹೈದರಾಬಾದ್‌ನಲ್ಲಿ ನಡೆದ ಅತಿ ದೊಡ್ಡ ಸೈಬರ್ ವಂಚನೆ ಪ್ರಕರಣ ಇದಾಗಿದೆ. ಹೈದರಾಬಾದ್‌ನ ಆಂಧ್ರಪ್ರದೇಶ ಮಹೇಶ್ ಕೋ ಆಪರೇಟೀವ್ ಬ್ಯಾಂಕ್‌ನ ಸರ್ವರ್ ಹ್ಯಾಕ್ ಮಾಡಿ 12 ಕೋಟಿ ರೂ. ಲೂಟಿ ಮಾಡಲಾಗಿದೆ.

ಸೈಬರ್ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಸರ್ವರ್ ಹ್ಯಾಕ್ ನಂತರ ನೂರಕ್ಕೂ ಹೆಚ್ಚು ಮುಖ್ಯ ಖಾತೆಗಳಿಗೆ ಲಾಗ್‌ಇನ್ ಆಗಿ, 12 ಕೋಟಿ ರೂ. ಹಣವನ್ನು ಬೇರೆ ಬೇರೆ ಅಕೌಂಟ್‌ಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!