ಹಾಸನದಲ್ಲಿ ಡಿವೈಎಸ್‌ಪಿ ಬ್ಯಾಂಕ್‌ ಖಾತೆಗೆ ಕನ್ನ: 15 ಲಕ್ಷ ರೂಪಾಯಿ ಎಗರಿಸಿದ ಖದೀಮರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸಿನಿಮೀಯ ರೀತಿಯಲ್ಲಿ ಡಿವೈಎಸ್‌ಪಿ ಒಬ್ಬರ ಬ್ಯಾಂಕ್ ಖಾತೆಗೆ  ಕನ್ನ ಹಾಕಿ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ಎಗರಿಸಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ಮುರಳೀಧರ್ ಅವರ ಖಾತೆಯಿಂದಲೇ 15,98,761 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಂಡು ಸೈಬರ್ ಖದೀಮರು ವಂಚನೆ ಮಾಡಿದ್ದಾರೆ. ಈ ಸಂಬಂಧ ಹಾಸನ ನಗರದ ಸಿಇಎನ್ ಪೊಲೀಸ್ ಠಾಣೆಗೆ ಮುರಳೀಧರ್ ಅವರು ದೂರು ನೀಡಿದ್ದಾರೆ.

ಮಡಿಕೇರಿಯ ಕೆನರಾ ಬ್ಯಾಂಕ್ ಮುಖ್ಯಶಾಖೆ ಹಾಗೂ ಭಾಗಮಂಡಲದ ಕೆನರಾಬ್ಯಾಂಕ್‌ನ ಶಾಖೆಯಲ್ಲಿ ಪಿ.ಕೆ.ಮುರಳೀಧರ್ ಖಾತೆಗಳನ್ನು ಹೊಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!